ಆಮೋಸ 5:11 - ಪರಿಶುದ್ದ ಬೈಬಲ್11 ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ. ಅಧ್ಯಾಯವನ್ನು ನೋಡಿ |
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”
ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.