ಆಮೋಸ 5:13 - ಪರಿಶುದ್ದ ಬೈಬಲ್13 ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ. ಅಧ್ಯಾಯವನ್ನು ನೋಡಿ |
ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.