Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:19 - ಪರಿಶುದ್ದ ಬೈಬಲ್‌

19 ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:19
12 ತಿಳಿವುಗಳ ಹೋಲಿಕೆ  

ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು.


ಯೆಹೋಶುವನು ತನ್ನ ಜನರಿಗೆ, “ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿರಿ. ಗುಹೆಯನ್ನು ಕಾಯುವುದಕ್ಕೆ ಕೆಲವು ಜನರು ಇಲ್ಲಿರಲಿ.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು