ಆಮೋಸ 5:24 - ಪರಿಶುದ್ದ ಬೈಬಲ್24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ. ಅಧ್ಯಾಯವನ್ನು ನೋಡಿ |
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.