ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.
ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’
“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.