ಆಮೋಸ 5:27 - ಪರಿಶುದ್ದ ಬೈಬಲ್27 ಆದ್ದರಿಂದ ನಾನು ನಿನ್ನನ್ನು ದಮಸ್ಕದ ಆಚೆಗೆ ಸೆರೆಯಾಳಾಗಿ ಕಳುಹಿಸುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.