ಆಮೋಸ 5:4 - ಪರಿಶುದ್ದ ಬೈಬಲ್4 ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.