ಆಮೋಸ 5:7 - ಪರಿಶುದ್ದ ಬೈಬಲ್7-9 ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ. ಅಧ್ಯಾಯವನ್ನು ನೋಡಿ |
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.