ಆಮೋಸ 6:1 - ಪರಿಶುದ್ದ ಬೈಬಲ್1 ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ! ಅಧ್ಯಾಯವನ್ನು ನೋಡಿ |
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.
ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”