ಆಮೋಸ 6:11 - ಪರಿಶುದ್ದ ಬೈಬಲ್11 ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಗೋ, ಸರ್ವೇಶ್ವರ ಆಜ್ಞಾಪಿಸಲು, ಕುಸಿದುಬೀಳುವುವು ಮಹಾಸೌಧಗಳು, ನುಚ್ಚುನೂರಾಗುವುವು ಚಿಕ್ಕಚಿಕ್ಕ ಮನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಗೋ, ಯೆಹೋವನು ಆಜ್ಞಾಪಿಸಲು ದೊಡ್ಡ ಮನೆಯು ಹೊಡೆಯಲ್ಪಟ್ಟು ಚೂರುಚೂರಾಗುವದು, ಚಿಕ್ಕ ಮನೆಯೂ ಮುರಿದುಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ, ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು. ಅಧ್ಯಾಯವನ್ನು ನೋಡಿ |
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.