Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:14 - ಪರಿಶುದ್ದ ಬೈಬಲ್‌

14 “ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:14
13 ತಿಳಿವುಗಳ ಹೋಲಿಕೆ  

ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


“ಪಶ್ಚಿಮದಲ್ಲಿ ಲೆಬೊಹಮಾತ್ ಎಂಬ ಸ್ಥಳದ ಮುಂಭಾಗದಲ್ಲಿರುವ ಸಮುದ್ರ ತೀರವೇ ಪಶ್ಚಿಮ ದಿಕ್ಕಿನ ಮೇರೆಯಾಗಿರುತ್ತದೆ.


ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು