ಆಮೋಸ 6:2 - ಪರಿಶುದ್ದ ಬೈಬಲ್2 ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ? ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!