ಆಮೋಸ 6:3 - ಪರಿಶುದ್ದ ಬೈಬಲ್3 ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಹಾ, ಆ ಮುಖಂಡರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ, ಅನ್ಯಾಯದ ಪೀಠವನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು, ಭಯಂಕರ ಆಳ್ವಿಕೆಯನ್ನು ಹತ್ತಿರ ಮಾಡಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿ |
ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”