ಆಮೋಸ 6:5 - ಪರಿಶುದ್ದ ಬೈಬಲ್5 ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ, ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ವೀಣೆಯ ಮೇಲೆ ಮನಸ್ಸುಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ವೀಣೆಯ ಸ್ವರಕ್ಕೆ ಹಾಡುತ್ತೀರಿ, ದಾವೀದನ ಹಾಗೆ ನಿಮಗೆ ನೀವೇ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿ |
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.