ಆಮೋಸ 6:8 - ಪರಿಶುದ್ದ ಬೈಬಲ್8 ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”