Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:9 - ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಒಂದು ಮನೆಯಲ್ಲಿ ಹತ್ತು ಮಂದಿ ಇದ್ದರೂ ಅವರು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮನೆಯೊಂದರಲ್ಲಿ ಹತ್ತುಮಂದಿ ಉಳಿದಿದ್ದರೂ ಅವರೆಲ್ಲರೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಂದು ಮನೆಯಲ್ಲಿ ಹತ್ತು ಜನರು ಉಳಿದರೂ ಅವರೆಲ್ಲರು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ, ಅವರು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:9
10 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.”


ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ. ಅವರ ತಂದೆಯ ದುಷ್ಟತನಕ್ಕಾಗಿ ಅವರನ್ನು ಕೊಲ್ಲಿರಿ. ಅವನ ಮಕ್ಕಳು ದೇಶವನ್ನು ಇನ್ನೆಂದಿಗೂ ತಮ್ಮ ವಶಕ್ಕೆ ತೆಗೆದುಕೊಳ್ಳಲಾರರು. ಅವರು ಪ್ರಪಂಚವನ್ನು ಇನ್ನೆಂದಿಗೂ ತಮ್ಮ ಪಟ್ಟಣಗಳಿಂದ ತುಂಬಿಸಲಾರರು.


ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.


ಅವನ ಮನೆಯಲ್ಲಿರುವ ಪ್ರತಿಯೊಂದನ್ನು ದೇವರ ಕೋಪದ ಪ್ರವಾಹವು ಕೊಚ್ಚಿಕೊಂಡುಹೋಗುವುದು.


ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.


ಯೋಬನಿಗೆ ಏಳು ಗಂಡುಮಕ್ಕಳೂ ಮೂರು ಹೆಣ್ಣುಮಕ್ಕಳೂ ಇದ್ದರು.


ಇವರು ಹಾಮಾನನ ಹತ್ತು ಗಂಡುಮಕ್ಕಳಾಗಿದ್ದರು. ಹಾಮಾನನು ಹಮ್ಮೆದಾತನ ಮಗನೂ ಯೆಹೂದ್ಯರ ಶತ್ರುವೂ ಆಗಿದ್ದನು. ಯೆಹೂದ್ಯರು ಅವರನ್ನು ಹತಿಸಿದ್ದು ಮಾತ್ರವೇ, ಹೊರತು ಅವರ ಸೊತ್ತುಗಳನ್ನು ಅಪಹರಿಸಲಿಲ್ಲ.


ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.


ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು