ಆಮೋಸ 7:10 - ಪರಿಶುದ್ದ ಬೈಬಲ್10 ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಅಧ್ಯಾಯವನ್ನು ನೋಡಿ |