Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:17 - ಪರಿಶುದ್ದ ಬೈಬಲ್‌

17 ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:17
24 ತಿಳಿವುಗಳ ಹೋಲಿಕೆ  

ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಬಳಿಕ ಯೆಹೋವನು, “ನಾನು ಇಸ್ರೇಲ್ ಜನರನ್ನು ಬಲವಂತವಾಗಿ ಕಳುಹಿಸುವ ಪರದೇಶಗಳಲ್ಲಿ ಅವರು ಅಶುದ್ಧವಾದ ರೊಟ್ಟಿಗಳನ್ನು ತಿನ್ನುತ್ತಾರೆಂದು ಇದು ಸೂಚಿಸುತ್ತದೆ” ಎಂದು ಹೇಳಿದನು.


ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”


ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು’” ಎಂದು ಹೇಳಿದ್ದಾನೆ.


ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.


ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.


ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.


ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಬಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೊಗವನ್ನು ತೆಗೆದುಕೊಂಡು ಮುರಿದುಹಾಕಿದ ಮೇಲೆ ಈ ಸಂದೇಶ ಬಂದಿತು.


ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”


ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.


ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.


ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.


ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು