Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:3 - ಪರಿಶುದ್ದ ಬೈಬಲ್‌

3 ಆಗ ಯೆಹೋವನು ತನ್ನ ನಿರ್ಧಾರವನ್ನು ಬದಲಿಸಿ ಹೀಗೆಂದನು, “ಅದು ನೆರವೇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:3
16 ತಿಳಿವುಗಳ ಹೋಲಿಕೆ  

“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.


“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ಆಗ ದೇವರಾದ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ, “ಇದು ಕೂಡಾ ನೆರವೇರದು” ಎಂದು ಹೇಳಿದನು.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”


ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.


ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು