Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:4 - ಪರಿಶುದ್ದ ಬೈಬಲ್‌

4 ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕರ್ತನಾದ ಯೆಹೋವನು ಇನ್ನೊಂದನ್ನು ನನಗೆ ತೋರಿಸಿದನು - ಆಹಾ, ಕರ್ತನಾದ ಯೆಹೋವನು ತನ್ನ ಪಕ್ಷವಾಗಿ ವ್ಯಾಜ್ಯವಾಡುವದಕ್ಕೆ ಅಗ್ನಿಯನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:4
22 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡತೆಗಳನ್ನು ತಯಾರು ಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು.


ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.


ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ಯೆಹೋವನು ಈ ದರ್ಶನವನ್ನು ನನಗೆ ದಯಪಾಲಿಸಿದನು. ಕೈಯಲ್ಲಿ ತೂಗುಗುಂಡನ್ನು ಹಿಡಿದುಕೊಂಡು ಗೋಡೆಯ ಬದಿಯಲ್ಲಿ ನಿಂತಿದ್ದನು. ಆ ಗೋಡೆಯು ನೂಲಿನಿಂದ ಗುರುತು ಮಾಡಲ್ಪಟ್ಟಿತ್ತು.


ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.


“ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.


ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.


ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.


ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು.


ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”


ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು