Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:8 - ಪರಿಶುದ್ದ ಬೈಬಲ್‌

8 ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ನೂಲುಗುಂಡು” ಅಂದೆನು. ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. ನಾನು “ಒಂದು ನೂಲುಗುಂಡು,” ಎಂದು ಉತ್ತರಕೊಟ್ಟೆ. ಆಗ ಸ್ವಾಮಿ, “ಇಗೋ,ನನ್ನ ಜನರಾದ ಇಸ್ರಯೇಲಿನ ಮಧ್ಯೆ ನೂಲುಗುಂಡನ್ನು ಹಿಡಿದು ಅವರ ನಡತೆ-ಗೋಡೆ ನೆಟ್ಟಗಿಲ್ಲವೆಂದು ತೋರಿಸುವೆನು. ಅವರನ್ನು ಕಂಡೂ ಕಾಣದಂತಿರದೆ, ದಂಡಿಸಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ನಾನು - ಒಂದು ನೂಲುಗುಂಡು ಎಂದು ಉತ್ತರಕೊಟ್ಟೆನು. ಆಗ ಕರ್ತನು - ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಹಿಡಿಯುವೆನು; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:8
15 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.


ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


“ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು.


ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು “ಬೆಂಗಾಡಿನ ಮರುಭೂಮಿ” ಎಂದು ಕರೆಯಲ್ಪಡುವದು.


ಯೆಹೋವನು ಈ ದರ್ಶನವನ್ನು ನನಗೆ ದಯಪಾಲಿಸಿದನು. ಕೈಯಲ್ಲಿ ತೂಗುಗುಂಡನ್ನು ಹಿಡಿದುಕೊಂಡು ಗೋಡೆಯ ಬದಿಯಲ್ಲಿ ನಿಂತಿದ್ದನು. ಆ ಗೋಡೆಯು ನೂಲಿನಿಂದ ಗುರುತು ಮಾಡಲ್ಪಟ್ಟಿತ್ತು.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.


ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು