ಆಮೋಸ 8:1 - ಪರಿಶುದ್ದ ಬೈಬಲ್1 ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಇಗೋ, ಮಾಗಿದ ಹಣ್ಣಿನ ಪುಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು. ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)