Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:10 - ಪರಿಶುದ್ದ ಬೈಬಲ್‌

10 ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:10
30 ತಿಳಿವುಗಳ ಹೋಲಿಕೆ  

ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವುದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು.


ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.


ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.


ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”


ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. ನಿಮ್ಮ ಹಾರ್ಪ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ.


ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.


“ಒಬ್ಬ ಮನುಷ್ಯನ ತಲೆಕೂದಲು ಉದುರಿಹೋಗುತ್ತಿದ್ದರೆ ಅವನು ಶುದ್ಧನಾಗಿದ್ದಾನೆ. ಅವನು ಬೋಳುತಲೆಯವನಷ್ಟೆ.


ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನಮ್ಮ ಹೃದಯಗಳಲ್ಲಿ ಆನಂದವೇ ಉಳಿದಿಲ್ಲ. ನಮ್ಮ ನರ್ತನದ ಸ್ಥಾನವನ್ನು ಗೋಳಾಟವು ಆವರಿಸಿಕೊಂಡಿದೆ.


ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. “ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು.


ಮದುಮಗನು ಸತ್ತುಹೋದಾಗ ಮದುಮಗಳು ಗೋಳಾಡುವಂತೆ ನೀವು ಗೋಳಾಡಿರಿ.


“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.


ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿ ಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು