ಆಮೋಸ 8:11 - ಪರಿಶುದ್ದ ಬೈಬಲ್11 ಯೆಹೋವನು ಹೇಳುವುದೇನೆಂದರೆ, “ನಿಮ್ಮ ದೇಶದಲ್ಲಿ ಹಸಿವೆಯ ದಿವಸಗಳನ್ನು ಬರಮಾಡುವೆನು. ಜನರು ರೊಟ್ಟಿಗಾಗಿ ಹಸಿಯುವುದಿಲ್ಲ. ನೀರಿಗಾಗಿ ಬಾಯಾರುವದಿಲ್ಲ. ಇಲ್ಲ! ಜನರು ಯೆಹೋವನ ವಾಕ್ಯಕ್ಕಾಗಿ ಹಸಿವೆಯುಳ್ಳವರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತಿವೆ; ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. ಅಧ್ಯಾಯವನ್ನು ನೋಡಿ |
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.