ಆಮೋಸ 8:12 - ಪರಿಶುದ್ದ ಬೈಬಲ್12 ಮೃತ್ಯುಸಮುದ್ರದಿಂದ ಮೆಡಿಟರೇನಿಯನ್ ಸಮುದ್ರದ ತನಕ, ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಯೆಹೋವನ ಸಂದೇಶಕ್ಕಾಗಿ ಹಾತೊರೆಯುತ್ತಾ ಅಲೆದಾಡುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಮುದ್ರದಿಂದ ಸಮುದ್ರಕ್ಕೆ, ಬಡಗಲಿಂದ ಮೂಡಲಿಗೆ ಬಳಲುತ್ತಾ ಹೋಗುವರು, ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು; ಆದರೂ ಅದು ಸಿಕ್ಕದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು. ಅಧ್ಯಾಯವನ್ನು ನೋಡಿ |
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.