Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:14 - ಪರಿಶುದ್ದ ಬೈಬಲ್‌

14 ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:14
32 ತಿಳಿವುಗಳ ಹೋಲಿಕೆ  

ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.


ಆದರೆ ಆ ಸಮಯದಲ್ಲಿ ದೇವರ ಮಾರ್ಗದ ಬಗ್ಗೆ ತೀವ್ರ ಗಲಭೆಯೊಂದು ಎಫೆಸದಲ್ಲಿ ಉಂಟಾಯಿತು. ಅದು ನಡೆದ ರೀತಿ ಇಂತಿದೆ:


ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸಿದನು.


ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.


ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.


“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’


“ನನ್ನ ವಿರುದ್ಧವಾಗಿ ಯುದ್ಧಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತುಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.


“ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.


ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.


“ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”


ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.


ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್.


ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.


ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು