Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:2 - ಪರಿಶುದ್ದ ಬೈಬಲ್‌

2 ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:2
25 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ನೂಲುಗುಂಡು” ಅಂದೆನು. ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು.


ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು; ನಮ್ಮ ಕೊನೆಯು ಬಂದಿತು!


ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.


“ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು.


“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’


ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.


ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ಅಂತ್ಯವು ಬರುವುದು. ಅದು ಬೇಗನೆ ಬರುವದು.


ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


ಆದರೆ ನಾನು ಇಸ್ರೇಲ್ ವಂಶದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ. ಇವರಿಗೆ ಮೊಂಡತನವಿರುವದು. ನಿನ್ನ ಮಾತನ್ನು ಕೇಳಲು ನಿರಾಕರಿಸುವರು. ಅವರಿಗೆ ನನ್ನ ಮಾತುಗಳನ್ನು ಕೇಳಲು ಇಷ್ಟವಿಲ್ಲ.


ನಾನು ಸ್ವತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.


ಆದ್ದರಿಂದ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗವನ್ನು ತರುವೆನು. ನಾನು ನಿನ್ನ ಜನರನ್ನೂ ಪ್ರಾಣಿಗಳನ್ನೂ ಸಂಪೂರ್ಣವಾಗಿ ಸಂಹರಿಸುವೆನು.


ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.


ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು