ಆಮೋಸ 8:3 - ಪರಿಶುದ್ದ ಬೈಬಲ್3 ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!” ಅಧ್ಯಾಯವನ್ನು ನೋಡಿ |
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.