ಆಮೋಸ 8:6 - ಪರಿಶುದ್ದ ಬೈಬಲ್6 ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟುಗೂಡಿಸಿ ಮಾರೋಣ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ದೇಶದ ದರಿದ್ರರನ್ನು ನಿರ್ಮೂಲ ಮಾಡುವವರೇ, ಕೇಳಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.” ಅಧ್ಯಾಯವನ್ನು ನೋಡಿ |
ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”