Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:7 - ಪರಿಶುದ್ದ ಬೈಬಲ್‌

7 ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:7
19 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


“ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ದೇವರ ಬಲವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ.


ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.


“ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.


ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.


ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.


ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.


ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು