Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:9 - ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆನ್ನುತ್ತಾನೆ, “ಆ ದಿವಸಗಳಲ್ಲಿ ನಡುಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:9
18 ತಿಳಿವುಗಳ ಹೋಲಿಕೆ  

ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು.


ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.


ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು.


ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”


“ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’


“ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದ್ದರಿಂದ ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.


ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.


ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು.


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಸೂರ್ಯನಲ್ಲಿ ಮೂರನೆಯ ಒಂದು ಭಾಗ, ಚಂದ್ರನಲ್ಲಿ ಮೂರನೆಯ ಒಂದು ಭಾಗ ಮತ್ತು ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗ ಬಡಿಯಲ್ಪಟ್ಟು ಅವುಗಳಲ್ಲಿ ಮೂರನೆಯ ಒಂದು ಭಾಗ ಕತ್ತಲಾಯಿತು. ಹಗಲಿನಲ್ಲಿಯೂ ರಾತ್ರಿಯಲ್ಲಿಯೂ ಮೂರನೆಯ ಒಂದು ಭಾಗಕ್ಕೆ ಬೆಳಕಿಲ್ಲದಂತಾಯಿತು.


ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು