Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:1 - ಪರಿಶುದ್ದ ಬೈಬಲ್‌

1 ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:1
28 ತಿಳಿವುಗಳ ಹೋಲಿಕೆ  

ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.


ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನೆಂದರೆ, “ಆತನು ಯಾರೆಂದು ನನಗೂ ಗೊತ್ತಿರಲಿಲ್ಲ. ಆದರೆ ಜನರಿಗೆ ದೀಕ್ಷಾಸ್ನಾನ ಕೊಡಲು ನನ್ನನ್ನು ಕಳುಹಿಸಿದಾತನು ನನಗೆ, ‘ಪವಿತ್ರಾತ್ಮನು ಇಳಿದುಬಂದು ಒಬ್ಬ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವೆ. ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವವನು ಆ ವ್ಯಕ್ತಿಯೇ’ ಎಂದು ಹೇಳಿದ್ದನು. ಇದು ನೆರವೇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪವಿತ್ರಾತ್ಮನು ಪರಲೋಕದಿಂದ ಪಾರಿವಾಳದ ರೂಪದಲ್ಲಿ ಇಳಿದುಬಂದು ಆತನ (ಯೇಸುವಿನ) ಮೇಲೆ ನೆಲಸುವುದನ್ನು ನಾನು ನೋಡಿದೆನು.


ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.


ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.


ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು.


ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದೆನು.


ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.


ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.


ಮೀಕಾಯೆಹುವು, “ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು.


ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.


ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.


ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುಗಳನ್ನು ಹಿಡಿದು ತರುವೆನು.


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ಯೆಹೋಶುವನು ತನ್ನ ಜನರಿಗೆ, “ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿರಿ. ಗುಹೆಯನ್ನು ಕಾಯುವುದಕ್ಕೆ ಕೆಲವು ಜನರು ಇಲ್ಲಿರಲಿ.


ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು