ಆಮೋಸ 9:12 - ಪರಿಶುದ್ದ ಬೈಬಲ್12 ಆಗ ಎದೋಮಿನಲ್ಲಿ ಉಳಿದವರು ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.” ಇದು ಯೆಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.