Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:13 - ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಇಂತೆನ್ನುತ್ತಾನೆ - ಆಹಾ, ಮುಂದಿನ ಕಾಲದಲ್ಲಿ ಉಳುವವನು ಕೊಯ್ಯುವವನ ಹಿಂದೆ, ದ್ರಾಕ್ಷೆತುಳಿಯುವವನು ಬಿತ್ತುವವನ ಹಿಂದೆ ಒತ್ತಿಕೊಂಡು ಹೋಗುವರು; ಬೆಟ್ಟಗಳು ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುತ್ತವೋ ಎಂಬಂತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:13
15 ತಿಳಿವುಗಳ ಹೋಲಿಕೆ  

ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ಕಣತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು.


ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ.


ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.


ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.


ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.


ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”


ಕಣಜಗಳು ಗೋದಿಯಿಂದ ತುಂಬಿರುವವು. ಪಿಪಾಯಿಗಳು ಎಣ್ಣೆಯಿಂದಲೂ ದ್ರಾಕ್ಷಾರಸದಿಂದಲೂ ತುಂಬಿತುಳುಕುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು