ಆಮೋಸ 9:2 - ಪರಿಶುದ್ದ ಬೈಬಲ್2 ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅಧ್ಯಾಯವನ್ನು ನೋಡಿ |
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”