ಆಮೋಸ 9:4 - ಪರಿಶುದ್ದ ಬೈಬಲ್4 ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.” ಅಧ್ಯಾಯವನ್ನು ನೋಡಿ |
“ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.