Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:9 - ಪರಿಶುದ್ದ ಬೈಬಲ್‌

9 ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:9
14 ತಿಳಿವುಗಳ ಹೋಲಿಕೆ  

“ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ಯೆಹೋವನು ಹೀಗೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತುಹೋಗುವುದು.”


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.


ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”


ದೇಶಾಂತರಕ್ಕೆ ಅವರನ್ನು ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನ್ನು ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಟತನಕ್ಕೆ ನಾನು ಶಿಕ್ಷಿಸಿದೆನು.


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ಸ್ತ್ರೀಯು ರೊಟ್ಟಿಯನ್ನು ತಯಾರಿಸುವಾಗ ಹಿಟ್ಟನ್ನು ಕೈಯಲ್ಲಿ ನಾದಿ ಅದನ್ನು ಚೆನ್ನಾಗಿ ಹದಗೊಳಿಸುವಳು. ಆದರೆ ಆಕೆ ಹಾಗೆಯೇ ಮಾಡುತ್ತಾ ಇರುವದಿಲ್ಲ. ಅದೇ ರೀತಿಯಲ್ಲಿ ಯೆಹೋವನು ಜನರನ್ನು ಶಿಕ್ಷಿಸುವನು. ಆತನು ಬಂಡಿಯ ಚಕ್ರದಿಂದ ಬೆದರಿಸುವನು. ಆದರೆ ಅವರನ್ನು ಸಂಪೂರ್ಣವಾಗಿ ಪುಡಿಪುಡಿ ಮಾಡುವದಿಲ್ಲ. ಅವರನ್ನು ತುಳಿದುಬಿಡಲು ಅನೇಕ ಕುದುರೆಗಳನ್ನು ಉಪಯೋಗಿಸುವದಿಲ್ಲ.


ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು