ಇಬ್ರಿಯರಿಗೆ 1:1 - ಪರಿಶುದ್ದ ಬೈಬಲ್1 ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅದ್ಲ್ಯಾ ಎಳಾತ್ ದೆವಾನ್ ಅಮ್ಚ್ಯಾ ಪುರ್ವಜಾಂಚ್ಯಾ ವಾಂಗ್ಡಾ ಸುಮಾರ್ ಎಳಾರ್ ದುಸ್ರ್ಯಾ-ದುಸ್ರ್ಯಾ ತರಾನ್ ಪ್ರವಾದ್ಯಾಂಚ್ಯಾ ಮುಖಾಂತರ್ ಬೊಲ್ಲ್ಯಾನ್. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.