ಇಬ್ರಿಯರಿಗೆ 1:8 - ಪರಿಶುದ್ದ ಬೈಬಲ್8 ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ಲೆಕಾಚ್ಯಾ ವಿಶಯಾತ್ ತೊ ಮನ್ತಾ, “ಯೆ ದೆವಾ ತುಜೊ ರಾಜ್ ಸದಾ ಸರ್ವತಾ ಪತರ್ ರ್‍ಹಾತಾ! ತಿಯಾ ತುಜ್ಯಾ ಲೊಕಾಂಚ್ಯಾ ವರ್ತಿ ನಿತಿಚೊ ರಾಜ್ ಚಾಲ್ವುತೆಯ್”. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”