ಇಬ್ರಿಯರಿಗೆ 10:10 - ಪರಿಶುದ್ದ ಬೈಬಲ್10 ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹ್ಯಾಚ್ ಇಚ್ಚ್ಯಾಸಾರ್ಕೆ ಜೆಜು ಕ್ರಿಸ್ತಾಚ್ಯಾ ಆಂಗಾಚ್ಯಾ ಎಕುಚ್‍ದಾ ಕರಲ್ಯಾ ಬಲಿ ವೈನಾ ಅಮಿ ಪವಿತ್ರ್ ಹೊಲ್ಯಾಂವ್. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.