Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:14 - ಪರಿಶುದ್ದ ಬೈಬಲ್‌

14 ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಎಕ್ ಭೆಟ್ವನಿ ವೈನಾ ತೆನಿ ಪಾಪಾತ್ ಪವಿತ್ರ್ ಹೊಲ್ಲೆ ಹಾತ್, ತೆಂಕಾ ಸದಾಸರ್ವತಾಕ್ ಸಂರ್ಪುನ್ ಕರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:14
16 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.


ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು.


ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.


ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.


ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.


ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.


ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು