ಇಬ್ರಿಯರಿಗೆ 10:26 - ಪರಿಶುದ್ದ ಬೈಬಲ್26 ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾವು ಸತ್ಯವನ್ನು ಅರಿತವರಾದ ಮೇಲೂ ಬೇಕುಬೇಕಾಗಿ ಪಾಪಮಾಡುತ್ತಲೇ ಇದ್ದರೆ, ಪಾಪಪರಿಹಾರಕ್ಕೆ ಇನ್ನು ನಮಗೆ ಬೇರೆ ಯಾವ ಬಲಿಯೂ ಇರುವುದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಕಶ್ಯಾಕ್ ಮಟ್ಲ್ಯಾರ್, ಖರೆ ಕಾಯ್ ಮನುನ್ ಕಳ್ವುನ್ ಘೆಟಲ್ಲೆ ಅಮಿ ಪಾಜೆ ಮನುನ್ ಪಾಪ್ ಕರ್ಲ್ಯಾರ್ ತೊ ಪಾಪ್ ಮಾಪ್ ಕರುಕ್ ಅನಿ ಎಕ್ ದುಸ್ರಿ ಬಲಿ ನಾ. ಅಧ್ಯಾಯವನ್ನು ನೋಡಿ |
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.