ಇಬ್ರಿಯರಿಗೆ 10:27 - ಪರಿಶುದ್ದ ಬೈಬಲ್27 ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಲೈ ಭಿಂಯಾನ್ ರಾಕಿತ್ ಹೊತ್ತ್ಯಾ ನ್ಯಾಯ್ ನಿರ್ನಯಾಚೊ ದಿಸ್ ದೆವಾಚ್ಯಾ ವಿರೊದ್ಯಾಕ್ನಿ ಜಾಳ್ವುತಲಿ ಮೊಟಿ ಆಗ್ ಹೆ ಸಗ್ಳೆ ಅಮ್ಚ್ಯಾ ಫಿಡೆ ಹಾಯ್. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”