ಇಬ್ರಿಯರಿಗೆ 10:29 - ಪರಿಶುದ್ದ ಬೈಬಲ್29 ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಕೊನ್‍ತರಿ ಎಕ್ಲೊ ದೆವಾಚ್ಯಾ ಲೆಕಾಕ್ ತುಡ್ವುನ್ ಕರಾರ್ ಘಟ್ಟ್ ಕರಲ್ಯಾ ಅಪ್ನಾಕ್ ಪವಿತ್ರ್ ಕರಲ್ಯಾ ರಗ್ತಾಕ್ ಅಶುದ್ದ್ ಮನುನ್ಗೆವ್ನ್ ದೆವಾಚಿ ಕುರ್ಪಾ ಹೊವ್ನ್ ಹೊತ್ತ್ಯಾ ಆತ್ಮ್ಯಾಕ್ ಅವಮಾನ್ ಕರಲೊ ರಾಲ್ಯಾರ್ ತೆಕಾ ಕವ್ಡಿ ಮೊಟಿ ಶಿಕ್ಷಾ ಗಾವ್ತಾ ಅಸಿಲ್? ಅಧ್ಯಾಯವನ್ನು ನೋಡಿ |
ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.