ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.
ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.
ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು.
ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.
ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.
ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.
“ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.
“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!