ಇಬ್ರಿಯರಿಗೆ 10:39 - ಪರಿಶುದ್ದ ಬೈಬಲ್39 ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಖರೆ ಅಮಿ ಫಾಟಿ ಸರ್ಕುನ್ ನಾಸ್ ಹೊತಲೆ ನ್ಹಯ್, ಹೆಚ್ಯಾ ಬದ್ಲಾಕ್ ವಿಶ್ವಾಸಾನ್ ರ್‍ಹಾವ್ನ್ ಸುಟ್ಕಾ ಖಮ್ವುನ್ ಘೆತಲ್ಯಾಂಚ್ಯಾ ಮದ್ಲೆಚ್. ಅಧ್ಯಾಯವನ್ನು ನೋಡಿ |
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.