ಇಬ್ರಿಯರಿಗೆ 10:5 - ಪರಿಶುದ್ದ ಬೈಬಲ್5 ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ - [ದೇವರೇ], ಯಜ್ಞನೈವೇದ್ಯಗಳು ನಿನಗೆ ಇಷ್ಟವಾಗಿರಲಿಲ್ಲ, ನನಗೆ ದೇಹವನ್ನು ಸಿದ್ಧಮಾಡಿಕೊಟ್ಟಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಕ್ರಿಸ್ತ ಯೇಸು ಭೂಲೋಕದೊಳಗೆ ಬಂದಾಗ, “ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿ ಕೊಟ್ಟಿರುವೆ; ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಸೆ ಹೊವ್ನ್, ಕ್ರಿಸ್ತ್ ಹ್ಯಾ ಜಗಾತ್ ಯೆತಾನಾ ಸಾಂಗಲ್ಲೆ ಕಾಯ್ ಮಟ್ಲ್ಯಾರ್, ದೆವಾ ತುಕಾ ಯಜ್ನ್ ಕರ್‍ತಲೆ ಅನಿ ಕಾನಿಕಾಚಿ ಆಶಾ ನಾ ಖರೆ ತಿಯಾ ಮಾಜ್ಯಾ ಸಾಟ್ನಿ ಆಂಗ್ ತಯಾರ್ ಕರುನ್ ಥವ್ಲೈ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.