Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:1 - ಪರಿಶುದ್ದ ಬೈಬಲ್‌

1 ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಂಬಿಕೆಯೋ ನಾವು ನಿರೀಕ್ಷಿಸುವವುಗಳ ವಿಷಯವಾಗಿ ಭರವಸದಿಂದಿರುವದೂ ಕಣ್ಣಿಗೆ ಕಾಣದವುಗಳನ್ನು ನಿಜವೆಂದು ತಿಳುಕೊಳ್ಳುವದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ವಿಶ್ವಾಸ್, ಮನ್ತಲೊ ಅಮಿ ರಾಕುನ್ಗೆತ್ ಹೊತ್ತ್ಯಾ ವಿಶಯಾತ್ ಬರೊಸ್ಯಾನ್ ರಾತಲೆ ಅನಿ ಡೊಳ್ಯಾಕ್ ದಿಸಿನಸಲ್ಲೆ ಖರೆ ಮನುನ್ ಕಳ್ವುನ್ ಘೆತಲೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:1
24 ತಿಳಿವುಗಳ ಹೋಲಿಕೆ  

ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ.


ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಯೆಹೋವನ ಒಳ್ಳೆಯತನವನ್ನು ನಾನು ಸಾಯುವುದಕ್ಕಿಂತ ಮುಂಚೆ ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.


ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;


ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.


ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ನನಗೆ ನನ್ನ ವಿಷಯದಲ್ಲಿ ಭರವಸೆ ಇರುವುದರಿಂದ ನಾನು ಹೊಗಳಿಕೊಳ್ಳುತ್ತೇನೆ. ಆದರೆ ಪ್ರಭು ಮಾತಾಡುವಂತೆ ನಾನು ಮಾತಾಡುತ್ತಿಲ್ಲ. ನಾನು ಬುದ್ಧಿಹೀನನೆಂದು ಹೊಗಳಿಕೊಳ್ಳುತ್ತಿದ್ದೇನೆ.


ಒಂದುವೇಳೆ ಮಕೆದೋನಿಯದ ಜನರಲ್ಲಿ ಯಾರಾದರೂ ನನ್ನೊಂದಿಗೆ ಬಂದಾಗ ನೀವು ಸಿದ್ಧರಾಗಿಲ್ಲದಿದ್ದರೆ ನಾವು ನಾಚಿಕೆಗೆ ಗುರಿಯಾಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಬಹಳ ಭರವಸೆ ಇಟ್ಟಿದ್ದರಿಂದ ನಾವು ನಾಚಿಕೆಗೆ ಗುರಿಯಾಗುವೆವು (ಮತ್ತು ನೀವೂ ಸಹ ನಾಚಿಕೆಗೆ ಗುರಿಯಾಗುವಿರಿ.)


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು