ಇಬ್ರಿಯರಿಗೆ 11:17 - ಪರಿಶುದ್ದ ಬೈಬಲ್17-18 ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917-18 ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17-18 ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಬ್ರಾಹಾಮಾನ್ ವಿಶ್ವಾಸಾ ವೈನಾಚ್ ಇಸಾಕಾಕ್ ತೊ ಅಪ್ಲೊ ಎಕುಚ್ ಲೆಕ್ ಹೊಲ್ಯಾರ್ಬಿ ದೆವಾಕ್ ಒಪ್ಸುನ್ ದಿಲ್ಯಾನ್ . ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.