Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:27 - ಪರಿಶುದ್ದ ಬೈಬಲ್‌

27 ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೊ ರಾಜಾಚ್ಯಾ ರಾಗಾಕ್ ಭಿಂಯಿನಸ್ತಾನಾ ವಿಶ್ವಾಸಾನ್ ಇಜಿಪ್ತ್ ದೆಶ್ ಸೊಡುನ್ ಗೆಲ್ಯಾನ್, ತೊ ದಿಸಿನಸಲ್ಯಾ ದೆವಾಕ್ ಬಗ್ತಲೊ ಮಟ್ಲ್ಯಾ ಸಾರ್ಕೆ ಘಟ್ಟ್ ಮನ್ ಕರುನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:27
27 ತಿಳಿವುಗಳ ಹೋಲಿಕೆ  

ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.


ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.


ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.


ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ.


ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.


ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.


ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.


ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.


ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು.


ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು